ಎಎಪಿ ಮಾಜಿ ಶಾಸಕ ಸುರೇಂದ್ರ ಸಿಂಗ್ ಬಿಜೆಪಿಗೆ ಸೇರ್ಪಡೆ

Prasthutha|

ಹೊಸದಿಲ್ಲಿ: ದೆಹಲಿಯ ಆಮ್‌ ಆದ್ಮಿ ಪಕ್ಷದ (ಎಎಪಿ) ಮಾಜಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -

ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸುರೇಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ‌

2020ರ ದೆಹಲಿ ವಿಧಾನಸಭೆ ಚುನಾವಣೆಯ ಸಂದರ್ಭ ಟಿಕೆಟ್ ವಂಚಿತರಾಗಿದ್ದ ಅವರು ಎಎಪಿಗೆ ರಾಜೀನಾಮೆ ಸಲ್ಲಿಸಿದ್ದರು.

- Advertisement -

ದೆಹಲಿ ಮಹಾನಗರ ಪಾಲಿಕೆಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಫಲಿತಾಂಶ ಹೊರಬೀಳಲಿದೆ.

Join Whatsapp