ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಮಾರ್ಚ್ 12ರಂದು ಕಾಂಗ್ರೆಸ್ ತೊರೆದು ಕೆಲವು ವಾರಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
“ಕಾಂಗ್ರೆಸ್ ಹೈಕಮಾಂಡ್ ನ ಕೆಟ್ಟ ನಿರ್ಧಾರಗಳಿಂದ ಎಲ್ಲಾ ರಾಜ್ಯಗಳು ತೊಂದರೆ ಅನುಭವಿಸುತ್ತಿವೆ. ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಹಾಳಾಗುತ್ತಿದೆ. ನಾಯಕರು ಜನರ ಜತೆ ಚರ್ಚಿಸುತ್ತಿಲ್ಲ. ನಾಯಕರ ಅಭಿಪ್ರಾಯಗಳನ್ನು ಪರಿಗಣಿಸುತ್ತಿಲ್ಲ. ಇದು ಒಂದು ರಾಜ್ಯದ ಕತೆಯಲ್ಲ. ಎಲ್ಲಾ ರಾಜ್ಯಗಳಲ್ಲಿಯೂ ಇದೇ ಕತೆ” ಎಂದು ಕಿರಣ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.