ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್ ಜಗದೀಶ್ ರನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ವಕೀಲ ಜಗದೀಶ್ ಮೇಲೆ ಯುವಕನೋರ್ವ ಕುತ್ತಿಗೆ ಹಿಡಿದು ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಯುವಕ ಕಣ್ಣು ಮುಖ ಮೂತಿ ನೋಡದೇ ಪಂಚ್ ಮಾಡಿದ್ದರಿಂದ ಜಗದೀಶ ಕಣ್ಣು ಊದಿಕೊಂಡಿತ್ತು. ಇದೀಗ ಮತ್ತೆ ಪುಂಡರಿಂದ ಜಗದೀಶ್ ಮೇಲೆ ಹಲ್ಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಅಣ್ಣಮ್ಮ ಕೂರಿಸುವ ವಿಚಾರಕ್ಕೆ ಮತ್ತೆ ಗಲಾಟೆಯಾಗಿರುವ ಶಂಕೆ ವ್ಯಕ್ತವಾಗಿದೆ. ನೂರಾರು ಮಂದಿಯಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ.