ಮೇವು ಹಗರಣ | ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು

Prasthutha|

ಜಾರ್ಖಂಡ್ : ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಷ್ಟ್ರೀಯ ಜನತಾ ದಳದ ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು ಜಾಮೀನು ನೀಡಿದೆ.

ಪ್ರಸ್ತುತ ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್ ಯಾದವ್ ಅವರು ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ಇದೀಗ ಬಾಕಿ ಇದ್ದ ‘ದುಮ್ಕಾ ಖಜಾನೆ ಪ್ರಕರಣ’ ಎಂದು ಕರೆಯಲ್ಪಡುತ್ತಿದ್ದ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದಾರೆ.

- Advertisement -

ಹೀಗಾಗಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ, ಮನೆಗೆ ಮರಳಲಿದ್ದಾರೆ ಎನ್ನಲಾಗಿದೆ.

- Advertisement -