ಮಾಜಿ ಶಾಸಕ ಮತ್ತು ಮೂವರು ಪುತ್ರರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

Prasthutha|

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗಳೂರ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷದ ಅಭ್ಯರ್ಥಿ ಎಸ್​.ವಿ ರಾಮಚಂದ್ರ ಅವರ ಸೋಲಿಗೆ ಕಾರಣರಾ‌ದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಟಿ. ಗುರುಸಿದ್ದನಗೌಡ ಮತ್ತು ಅವರ ಮೂವರು ಮಕ್ಕಳನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

- Advertisement -

ಬಿಜೆಪಿ‌ ರಾಜ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚನೆ ಮೆರೆಗೆ, ಮಾಜಿ ಶಾಸಕ ಗುರುಸಿದ್ದನಗೌಡ ಮತ್ತು ಇವರ ಪುತ್ರರಾದ ಡಾ.ಟಿ.ಜಿ. ರವಿಕುಮಾರ, ಟಿಜಿ ಅರವಿಂದಕುಮಾರ, ಟಿಜಿ ಪವನಕುಮಾರ ಅವರನ್ನು ಬರುವ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಜಗಳೂರು ಕ್ಷೇತ್ರದ ಶಾಸಕರಾಗಿದ್ದ ಗುರುಸಿದ್ದನಗೌಡ ಅವರು ಚೆಕ್​ಡ್ಯಾಂ ಗೌಡ್ರು, ದಾವಣಗೆರೆ ವಾಜಪೇಯಿ ಎಂದೇ ಪ್ರಸಿದ್ಧಿ ಗಳಿಸಿದ್ದರು. ಇನ್ನು ಮುಂಬರುವ ಲೋಕಸಭೆಗೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದರು.

- Advertisement -

ಯಶವಂತಪುರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಉಚ್ಚಾಟನೆ

ಇತ್ತೀಚಿಗೆ ಯಶವಂತಪುರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮಾರೇಗೌಡ, ಯಶವಂತಪುರ ನಗರ ಮಂಡಲದ ಉಪಾಧ್ಯಕ್ಷ ಧನಂಜಯ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿತ್ತು. ಪಕ್ಷವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ ಮಾರೇಗೌಡ, ಧನಂಜಯ ಅವರನ್ನು 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಬಿ.ನಾರಾಯಣ ಆದೇಶ ಹೊರಡಿಸಿದ್ದರು. ಮಾರೇಗೌಡ, ಧನಂಜಯ ವಿರುದ್ಧ ಎಸ್​ಟಿ ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ರಾಜ್ಯ ಬಿಜೆಪಿ ಘಟಕದ ನಾಯಕರಿಗೂ ದೂರು ನೀಡಿದ್ದರು.

Join Whatsapp