ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಅ.20ಕ್ಕೆ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ಕಾಂಗ್ರೆಸ್ ನ ಆಪರೇಷನ್ ಹಸ್ತ ಮುಂದುವರೆದಿದ್ದು, ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಅವರು ಭಾನುವಾರ ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಅಕ್ಟೋಬರ್ 20ಕ್ಕೆ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

- Advertisement -


ಕಳೆದ ತಿಂಗಳು ಕೆ ಆರ್ ಪುರಂನ ದೇವಸಂದ್ರನಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿದ್ದರು. ಆಗಲೇ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಬಗ್ಗೆ ಪುಷ್ಠಿ ನೀಡಿತ್ತು. ಪೂರ್ಣಿಮಾ ತಂದೆ ದಿವಂಗತ ಕೃಷ್ಣಪ್ಪ ಕೂಡ ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.



Join Whatsapp