ಕೊನೆಗೂ 10 ನೇ ತರಗತಿ ಪಾಸಾದ ಮಾಜಿ ಮುಖ್ಯಮಂತ್ರಿ

Prasthutha|

ಚಂಡಿಗಢ: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ 86 ವರ್ಷದಲ್ಲಿ 10ನೇ ತರಗತಿ ಪರೀಕ್ಷೆ ಪಾಸ್ ಮಾಡಿದ್ದಾರೆ. ಇಂಗ್ಲೀಷ್ ವಿಷಯದಲ್ಲಿ ಚೌಟಾಲಾ ಅವರು 88 ಅಂಕ ಪಡೆದಿದ್ದು, ಈ ಮೂಲಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ 10ನೇ ತರಗತಿ ಪಾಸ್ ಮಾಡಿದ ಅತ್ಯಂತ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

ಚೌಟಾಲಾ ಕಳೆದ ವರ್ಷ 12ನೇ ತರಗತಿ ಪರೀಕ್ಷೆ ತೆಗೆದುಕೊಂಡಿದ್ದು, ಕೊರೋನಾ ಕಾರಣದಿಂದ ಪರೀಕ್ಷೆ ರದ್ದಾಗಿ ನಿಯಮದ ಪ್ರಕಾರ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಆದರೆ, ಓಂ ಪ್ರಕಾಶ್ ಚೌತಾಲ 10ನೇ ತರಗತಿ ಪರೀಕ್ಷೆ ಪಾಸ್ ಮಾಡಿರದ ಕಾರಣ ಅವರ 12 ನೇ ತರಗತಿ ಫಲಿತಾಂಶ ತಡೆ ಹಿಡಿಯಲಾಗಿತ್ತು.

- Advertisement -