ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಜ್ವರದಿಂದ ಬಳಲುತ್ತಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ತಡ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ಮಾಡಲಾಗಿತ್ತು. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾವುದೇ ತೊಂದರೆ ಇಲ್ಲ. ಶೀಘ್ರ ಅವರು ಮನೆಗೆ ಮರಳಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Join Whatsapp