ಹೈದರಾಬಾದ್: ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಸದ್ಯ ಅನಾರೋಗ್ಯದಿಂದಾಗಿ ಜೈಲಿನಿಂದ ಹೊರಬಂದು ಚಿಕಿತ್ಸೆ ಪಡೆಯುತ್ತಿರುವ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಮಲ್ಲಿಕಾರ್ಜುನ್ ರಾವ್ ಅವರು, ಬಾಬು ಅವರ ಮನವಿಯನ್ನು ಪುರಸ್ಕರಿಸಿದರು. ಅನಾರೋಗ್ಯ ನಿಮಿತ್ತ ಬಾಬು ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿ ಇದೇ 28ಕ್ಕೆ ಮುಗಿಯಲಿದ್ದು, ಅವರು ಮತ್ತೆ ಜೈಲಿಗೆ ಹೋಗುವುದು ತಪ್ಪಿದೆ.