Home ಟಾಪ್ ಸುದ್ದಿಗಳು ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕಂಬನಿ: ಎಲ್ಲರೂ ಹೃದಯ ಚೆಕಪ್ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿ ಸಲಹೆ

ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕಂಬನಿ: ಎಲ್ಲರೂ ಹೃದಯ ಚೆಕಪ್ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿ ಸಲಹೆ

ಬೆಂಗಳೂರು: ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.


ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ ಎಂದು ಹೇಳಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲಕ ಹಿನ್ನಲೆ ಕೊವಿಡ್ ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. ಪ್ರತಿಯೊಬ್ಬರು ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಎಚ್ಚರವಹಿಸಬೇಕು. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಅ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಅ ನೋವು ಭರಿಸುವ ಶಕ್ತಿ ಭಗವಂತ ನೀಡಲಿʼʼ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ಆಘಾತ ವ್ಯಕ್ತಪಡಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತೇಷ್ಟರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ.

Join Whatsapp
Exit mobile version