ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

 ನಿರಂತರ ಚುನಾವಣಾ ಪ್ರಚಾರ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದೆ. ಹೀಗಾಗಿ, ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜೆಡಿಎಸ್‌ ಮಾಧ್ಯಮ ಪ್ರಕಟಣೆ ತಿಳಿಸಿದೆ.

  ಅಭ್ಯರ್ಥಿ ಅಂತಿಮಗೊಳಿಸುವ ಕಾರ್ಯ ಮತ್ತು ನಿರಂತರ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಆಯಾಸಗೊಂಡಿದ್ದ ಕುಮಾರಸ್ವಾಮಿ ಶನಿವಾರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಶ್ರಾಂತಿ ಪಡೆದುಕೊಂಡರು. ಆದರೆ, ಸಂಜೆ ಬಳಿಕ ಜ್ವರದ ಕಾಣಿಸಿಕೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಹೀಗಾಗಿ, ಭಾನುವಾರದಿಂದ ನಡೆಯಬೇಕಿದ್ದ ಪ್ರಚಾರ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜೆಡಿಎಸ್ ತಿಳಿಸಿದೆ.



Join Whatsapp