ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ: ಡಿಕೆ ಸಹೋದರರಿಗೆ ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ

Prasthutha|

ಬೆಂಗಳೂರು : ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಕೆ ಸಹೋದರರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಕಿದ್ದಾರೆ.

- Advertisement -

ನಾನು ಅವರನ್ನಾಗಲಿ ಅಥವಾ ಮತ್ತೆ ಯಾರನ್ನೇ ಆಗಲಿ  ಟಾರ್ಗೆಟ್ ಮಾಡ್ತಿಲ್ಲ, ನನಗೂ ಅವರಿಗೂ ಸಂಬಂಧ ಇಲ್ಲ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಆದರೆ ನನ್ನನ್ನ ಅವರು ಟಾರ್ಗೆಟ್ ಮಾಡಿದ್ದಾರೆ ಎಂದು ಅವರು ಹೇಳಿದರು.

ಅವರು ಕುಮಾರಸ್ವಾಮಿಯನ್ನು ರಾಮನಗರದಿಂದ ಖಾಲಿ ಮಾಡಿಸಬೇಕಂತೆ. ನನ್ನನ್ನು ಖಾಲಿ ಮಾಡಿಸಲು ಆಗುತ್ತಾ ಅನ್ನುವುದು ಅವರಿಗೆ ಗೊತ್ತಿಲ್ಲ. ರಾಮನಗರ ಜಿಲ್ಲೆಗೂ ನನಗೂ ಇರುವ ಸಂಬಂಧ ಸಾವಿರಾರು ಬಾರಿ ಹೇಳಿದ್ದೇನೆ. ನನಗೂ ಈ ಜಿಲ್ಲೆಗೂ ತಾಯಿ ಮಗನ ಸಂಬಂಧ ಇದೆ ಎಂದು ತಿರುಗೇಟು ನೀಡಿದರು.

Join Whatsapp