ಚಿಕ್ಕಮಗಳೂರು: ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಮಡಿಕೇರಿ ಘಟನೆ ಬಳಿಕ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಸಿದ್ದರಾಮಯ್ಯ ಅವರು ಶೃಂಗೇರಿ ಹಾಗೂ ಮೂಡಿಗೆರೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ತಡರಾತ್ರಿಯೇ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಶೃಂಗೇರಿ ಕ್ಷೇತ್ರ ಭೇಟಿಯ ಬಳಿಕ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಭಾಗಿಯಾಗಲಿದ್ದಾರೆ.
ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ. ಡಿ. ರಾಜೇಗೌಡ ನಿವಾಸದಲ್ಲಿ ಬೆಳಗಿನ ಉಪಹಾರದ ಬಳಿಕ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮೂಡಿಗೆರೆ ಕ್ಷೇತ್ರದ ಹಿರೇಬೈಲು, ಕಳಸ, ಕೊಟ್ಟಿಗೆಹಾರಕ್ಕೆ ಭಾಗಕ್ಕೆ ಭೇಟಿ ನೀಡಲಿದ್ದಾರೆ.
ಮರಬಿದ್ದು ಇಬ್ಬರು ಮೃತಪಟ್ಟ ಕೊವೆ ಗ್ರಾಮಕ್ಕೆ ಭೇಟಿ ನೀಡಿ ಬಳಿಕ ಮೂಡಿಗೆರೆ ಐಬಿಯಲ್ಲಿ ಬೆಳೆಗಾಗರರೊಂದಿಗೆ ಸಭೆ ನಡೆಸಿ, ಬಳಿಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ.