ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.