ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

Prasthutha|

ಕಾರ್ಕಳ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ.

- Advertisement -

ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ತಿಳಿಸಿದೆ.

- Advertisement -

ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ತಮಿಳು ಚಿತ್ರವೊಂದರಲ್ಲಿಯೂ ಅಭಿನಯಿಸಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ‘ಶೃಂಗಾರಂ’ನಲ್ಲಿ ಅವರು ನಟಿಸಿದ್ದರು.

ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

Join Whatsapp