ಕಾಶಿಪುರ: ಲಾಲ್’ಕೌನ್ ವಿಧಾನಸಭಾ ಮತಕ್ಷೇತದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು 14 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮೋಹನ್ ಬಿಶಾತ್ ವಿರುದ್ಧ ಸೋಲು ಕಂಡಿದ್ದಾರೆ.
ಹರೀಶ್ ರಾವತ್ ಅವರು 2014ರಿಂದ 2017ರವರೆಗೂ ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು.
ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ, ರಾಷ್ಟ್ರೀಯ ಪಕ್ಷ ಬಿಜೆಪಿ ಬಹುಮತದತ್ತ ಸಾಗಿದೆ.
ಸದ್ಯ 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, 4 ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ.