ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳು ಸ್ವಕೋಮಿನವರಾದರೆ ಸಂಘಟನೆಗಳು ಮೌನ: ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಕಿಡಿ

Prasthutha|

‘ಉಳಾಯಿಬೆಟ್ಟು ಅತ್ಯಾಚಾರ ಘಟನೆ ದ. ಕ ಜಿಲ್ಲೆಯ ಜನರನ್ನು ತಲೆತಗ್ಗಿಸುವಂತೆ ಮಾಡಿದೆ

- Advertisement -

ಮಂಗಳೂರು: ಉಳಾಯಿಬೆಟ್ಟುವಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಕೊಲೆ ಜಿಲ್ಲೆಯ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಹೇಳಿದ್ದಾರೆ.


ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿಯ ಕೃತ್ಯ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದೆ. ನಗರದಲ್ಲಿ ಇದು ಎರಡನೇ ಪ್ರಕರಣವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಜಾಗೃತವಾಗಬೇಕು. ಮಾತ್ರವಲ್ಲದೆ ಜನರು ಎಚ್ಚರಿಕೆ ವಹಿಸಬೇಕಿದೆ ಎಂದರು.

- Advertisement -


ನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರ ಮೇಲೆ ಪೋಕ್ಸೋ ಕಾಯ್ದೆ ಹಾಕಿದರೆ ಸಾಕಾಗುವುದಿಲ್ಲ. ಸ್ಥಳದಲ್ಲೇ ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು. ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಅಲ್ಲಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಕಿರುಕುಳ ನೀಡಲಾಗುತ್ತಿದೆ. ಸ್ವ ಕೋಮಿನಲ್ಲಿ ನಡೆಯುವ ಕೃತ್ಯಗಳ ಬಗ್ಗೆ ಯಾವುದೇ ಸಂಘಟನೆ ಧ್ವನಿ ಎತ್ತುತ್ತಿಲ್ಲ. ಅನ್ಯ ಕೋಮಿನ ವಿಚಾರ ಬಂದರೆ ತಕ್ಷಣ ಸಂಘಟನೆಗಳು ಮುಂದೆ ಬರುತ್ತವೆ. ಇಲ್ಲಿ ರಾಜಕೀಯ ಮೈಲೇಜ್ ಪಡೆಯುವ ಒಂದು ಕಾರ್ಯ ಆಗಿದೆವಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.


ವಾಸ್ತವದಲ್ಲಿ ಮಹಿಳೆಯರಿಗೆ ಯಾವುದೇ ನ್ಯಾಯ ಸಿಗುತ್ತಿಲ್ಲ. ಈ ಬಗ್ಗೆ ಜನರು ಒಂದಾಗಿ ಹೋರಾಟ ಮಾಡಬೇಕು. ಸಂಘ ಸಂಸ್ಥೆಗಳು ಈ ಬಗ್ಗೆ ಧ್ವನಿ ಎತ್ತುವ ಅಗತ್ಯತವಿದೆ. ಕೇವಲ ದೀಪ ಬೆಳಗಿ ಪ್ರತಿಭಟಿಸುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಕೇವಲ ಕ್ಯಾಂಡಲ್ ಹಚ್ಚಿ ಪ್ರಚಾರ ಗಿಟ್ಟಿಸಿಕೊಳ್ಳುವವರು ಹೆಚ್ಚು. ಅದರ ಬದಲು ಆರೋಪಿಗಳಿಗೆ ಶಿಕ್ಷೆ ಆಗುವಂತೆ ಮಾಡಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.



Join Whatsapp