ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ ಆರೋಪ: ಕಾಂಗ್ರೆಸ್ ಮಾಜಿ ಶಾಸಕ ವಾಸುಗೆ ನೋಟಿಸ್

Prasthutha|

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಾಜಿ ಶಾಸಕ ಪಿ.ವಾಸುಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ತೂಗುಗತ್ತಿ ನೇತಾಡುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರು ವಾಸುಗೆ ನೋಟಿಸ್ ನೀಡಿದ್ದಾರೆ.

- Advertisement -


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೀರಿ. ಚಾಮರಾಜ ಕ್ಷೇತ್ರ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದೀರಿ. ಈ ಬಗ್ಗೆ ಕೆಪಿಸಿಸಿಗೆ ಲಿಖಿತ ಪತ್ರ ಬಂದಿದೆ. ಹೀಗಾಗಿ ನಿಮಗೆ ಪತ್ರ ಬಂದ 7 ದಿನಗಳ ಒಳಗೆ ಲಿಖಿತ ವಿವರಣೆ ಕೊಡಿ ಎಂದು ತಿಳಿಸಲಾಗಿದೆ. ವಾಸುಗೆ ಪಕ್ಷದಿಂದ ಗೇಟ್ ಪಾಸ್ ಕೊಡಿಸಲು ಸಿಎಂ ಸಿದ್ದರಾಮಯ್ಯ ಬೆಂಬಲಿಗರ ಶತಪ್ರಯತ್ನಕ್ಕೆ ಮೊದಲ ಯಶಸ್ಸು ಈ ಮೂಲಕ ಸಿಕ್ಕಂತಾಗಿದೆ. ಈ ಹಿಂದೆ ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಕಳೆದ ವಾರ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದರು. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದರು.

Join Whatsapp