ಕಾಂಗ್ರೆಸ್, ಸಮಾಜವಾದಿ ಪಕ್ಷದ ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆ

Prasthutha|

ಲಕ್ನೋ : ಇಲ್ಲಿನ ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ, ಸಹಾರನ್ಪುರದ ಕಾಂಗ್ರೆಸ್ ಶಾಸಕ ನರೇಶ್ ಸೈನಿ, ಫಿರೋಜಾಬಾದ್ ಶಾಸಕ ಹರಿ ಓಂ ಯಾದವ್ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಡಾ.ಧರ್ಮಪಾಲ್ ಸಿಂಗ್ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

- Advertisement -


ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. 403 ಸದಸ್ಯ ಬಲದ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಪಕ್ಷವು 39.67 ರಷ್ಟು ಮತಗಳನ್ನು ಗಳಿಸಿತು. ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಿಎಸ್ಪಿ 19 ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಕೇವಲ 7 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು

Join Whatsapp