Home ಟಾಪ್ ಸುದ್ದಿಗಳು ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಹಾರೈಸಿದ ಮಾಜಿ ಕಾಂಗ್ರೆಸ್ಸಿಗ ಗುಲಾಂ ನಬಿ ಆಝಾದ್

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಹಾರೈಸಿದ ಮಾಜಿ ಕಾಂಗ್ರೆಸ್ಸಿಗ ಗುಲಾಂ ನಬಿ ಆಝಾದ್

ಶ್ರೀನಗರ: ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬಳಿಕ ಸತತವಾಗಿ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕೆಂದು ನಾನು ಹಾರೈಸುತ್ತೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.


ಈ ಬಗ್ಗೆ ಶ್ರೀನಗರದಲ್ಲಿ ಮಾತನಾಡಿರುವ ಅವರು, ನಾನು ಕಾಂಗ್ರೆಸ್ ನಿಂದ ಬೇರ್ಪಟ್ಟಿದ್ದರೂ ಅದರ ಜಾತ್ಯತೀತ ಸಿದ್ಧಾಂತದ ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ ಅಷ್ಟೇ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲು ಸಾಧ್ಯವಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ. ಎಎಪಿಯು ಕೇಂದ್ರಾಡಳಿತ ಪ್ರದೇಶ ದೆಹಲಿಯ ಪಕ್ಷ ಮಾತ್ರ. ಅವರು ಪಂಜಾಬ್ ಅನ್ನು ಸಮರ್ಥವಾಗಿ ನಡೆಸಲು ಸಾಧ್ಯವಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

Join Whatsapp
Exit mobile version