ಚಿಕ್ಕೋಡಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕೋಡಿಯ ಹಾರೋಗೇರಿ ಪಟ್ಟಣದಲ್ಲಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾರೋಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದು ಬಂದಿದೆ.