ಪಣಜಿ: ಕಾಂಗ್ರೆಸ್ ನ ಹಿರಿಯ ನಾಯಕ, ಗೋವಾದ ಮಾಜಿ ಸಿಎಂ ರವಿ ನಾಯ್ಕ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ಬದಲಾವಣೆಯಾಗಿರುವುದು ಮಹತ್ವ ಪಡೆದುಕೊಂಡಿದೆ. ಶಾಸಕ ಸ್ಥಾನಕ್ಕೂ ರವಿ ನಾಯ್ಕ್ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಗೋವಾದ ಮತ್ತೋರ್ವ ಮಾಜಿ ಸಿಎಂ ಲೂಯ್ಜಿನ್ಹೋ ಫಲೆರಿಯೋ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಟಿಎಂಸಿ ಸೇರ್ಪಡೆಗೊಂಡಿದ್ದರು.
ನಾಯ್ಕ್ ರಾಜೀನಾಮೆ ಮೂಲಕ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ನ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಗೋವಾದಲ್ಲಿ ಪೋಂಡಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರವಿ ನಾಯ್ಕ್ ಸ್ಪೀಕರ್ ರಾಜೇಶ್ ಪಟ್ನೇಕರ್ ರಾಜೀನಾಮೆ ಸಲ್ಲಿಸಿದ್ದಾರೆ.
ರವಿ ನಾಯ್ಕ್ ಪುತ್ರರೂ ಈಗ ಬಿಜೆಪಿಯಲ್ಲಿದ್ದು “ನನ್ನ ಮುಂದಿನ ನಡೆ ಏನೆಂಬುದನ್ನು ಶೀಘ್ರವೇ ತಿಳಿಸುತ್ತೇನೆ” ಎಂದು ರವಿ ನಾಯ್ಕ್ ಹೇಳಿದ್ದಾರೆ.