ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಇನ್ನಿಲ್ಲ

Prasthutha|

ಹಿಮಾಚಲ ಪ್ರದೇಶ: ಹಿರಿಯ ಕಾಂಗ್ರೆಸ್ ಮುಖಂಡ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

- Advertisement -

ಸೋಮವಾರ ರಾತ್ರಿ ಹೃದಯಾಘಾತದಿಂದ ಅವರನ್ನು ಶಿಮ್ಲಾದ ಇಂದಿರಾಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವಾ ನಾಲ್ಕು ಗಂಟೆಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1962,1967,1972,1980ರಲ್ಲಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು, ಇಂದಿರಾಗಾಂಧಿ ಸಚಿವ ಸಂಪುಟದಲ್ಲಿ 1976-77 ಅವಧಿಯಲ್ಲಿ ಉಪ ಸಚಿವರಾಗಿದ್ದರು. 1982-83ರಲ್ಲಿ ಸಹ ಸಚಿವರಾಗಿದ್ದ ಅವರು, ಭಾರತದ ಅತ್ಯಂತ ಹಿರಿಯ ಕಾಂಗ್ರೆಸ್ ನಾಯಕರಲ್ಲೊಬ್ಬರಾಗಿದ್ದರು. ನೆಹರೂ ಕುಟುಂಬದ ಎಲ್ಲ ತಲೆಮಾರುಗಳ ಜೊತೆ ಕೆಲಸ ಮಾಡಿದ ಹೆಗ್ಗಳಿಕೆಯನ್ನೂ ಪಡೆದಿದ್ದರು.



Join Whatsapp