ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮೀ ನಾರಾಯಣ ಬಿಜೆಪಿ ಸೇರ್ಪಡೆ

Prasthutha|

ವಿಜಯನಗರ: ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮೀ ನಾರಾಯಣ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

- Advertisement -

ಇತ್ತೀಚೆಗಷ್ಟೇ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆ ಬಿಜೆಪಿ ಕಚೇರಿಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

- Advertisement -

ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಇದ್ದ ಸಂದರ್ಭದಲ್ಲಿ ಲಕ್ಷ್ಮೀ ನಾರಾಯಣ ಕರ್ತವ್ಯ ನಿರ್ವಹಿಸಿದ್ದರು. ಎಸ್​ಸಿ ಮೀಸಲು ಕ್ಷೇತ್ರವಾಗಿರುವ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಲಕ್ಷ್ಮೀ ನಾರಾಯಣ ಅವರು ಕಳೆದ ಕೆಲವು ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದು, ಈ ವೇಳೆ ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ಕಾಸೆಟ್ಟಿ ಉಮಾಪತಿ, ಲಕ್ಷ್ಮೀ ನಾರಾಯಣ ಕುಟುಂಬಸ್ಥರು ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.

Join Whatsapp