ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಕ್ ಅಬ್ದುಲ್ಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ ಫಾರೂಕ್ ಅಬ್ದುಲ್ಲಾ ಅವರಿಗೆ ಹೂಗುಚ್ಛ ನೀಡಿ ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.
ಸಚಿವ ಝಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಕೆ.ಗೋವಿಂದರಾಜು ಈ ಸಂದರ್ಭದಲ್ಲಿ ಹಾಜರಿದ್ದರು.