Home ಟಾಪ್ ಸುದ್ದಿಗಳು ಡಿಕೆಶಿ ನಿವಾಸದಲ್ಲಿ ಔತಣಕೂಟ: ಜಮ್ಮು-ಕಾಶ್ಮೀರ ಮಾಜಿ ಸಿಎಂ ಭಾಗಿ

ಡಿಕೆಶಿ ನಿವಾಸದಲ್ಲಿ ಔತಣಕೂಟ: ಜಮ್ಮು-ಕಾಶ್ಮೀರ ಮಾಜಿ ಸಿಎಂ ಭಾಗಿ

ಬೆಂಗಳೂರು: ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವರ ಔತಣಕೂಟ ಆಯೋಜಿಸಿದ್ದರು.
ಈ ಔತಣಕೂಟದಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದಲ್ಲಾ ಅವರು ಭಾಗಿಯಾಗಿರುವುದು ಕುತೂಹಲ ಮೂಡಿಸಿದೆ.

ಇವರಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಮತ್ತು ಫಾರೂಕ್ ಅಬ್ದುಲ್ಲಾ ಅವರು ಭೇಟಿಯಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದರು.

ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ .ಶರಣ ಪ್ರಕಾಶ್, ಎಂಸಿ ಸುಧಾಕರ್, ಜಮೀರ್ ಅಹ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ಕೆ ಜೆ ಜಾರ್ಜ್, ಕೆ.ವೆಂಕಟೇಶ್, ಜಿ.ಜಿ ಪರಮೇಶ್ವರ್, ಎಂ ಬಿ ಪಾಟೀಲ್, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಆರ್ ಬಿ ತಿಮ್ಮಾಪುರ, ಬೋಸರಾಜ್, ಹೆಚ್ ಕೆ ಪಾಟೀಲ್, ಶಿವಾನಂದ್ ಪಾಟೀಲ್, ರಾಮಲಿಂಗ ರೆಡ್ಡಿ, ಶಿವರಾಜ್ ತಂಗಡಗಿ, ಬಿ.ನಾಗೇಂದ್ರ ಅವರು ಔತಣಕೂಟದಲ್ಲಿ ಭಾಗಿಯಾಗಿದ್ದರು.

Join Whatsapp
Exit mobile version