ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್​ ಕಾಂಗ್ರೆಸ್ ಸೇರ್ಪಡೆ?

Prasthutha|

ಬೆಂಗಳೂರು: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ದೊರಕದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್‌ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ.

- Advertisement -

ಕಾಂಗ್ರೆಸ್‌ನ ಪ್ರಭಾವಿ ವೀರಶೈವ ಲಿಂಗಾಯತ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಬೆಂಗಳೂರಿನ ರಿಚ್ಮಂಡ್​ಟೌನ್​ನಲ್ಲಿರುವ ಸ್ಕೈಗಾರ್ಡನ್ ಅಪಾರ್ಟ್​ಮೆಂಟ್‌ನ ಫ್ಲ್ಯಾಟ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಉಪಸ್ಥಿತಿಯಲ್ಲಿ ನಿನ್ನೆ ರಾತ್ರಿ ಇಡೀ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ ಕುರಿತಂತೆ ಸುದೀರ್ಘ ಐದು ಗಂಟೆಗಳ ಕಾಲ ರಹಸ್ಯ ಚರ್ಚೆ ನಡೆದಿದೆ ಎನ್ನಲಾಗಿದೆ.

ಬಿಜೆಪಿ ವರಿಷ್ಠರ ಸಂಧಾನಕ್ಕೆ ಮಣಿಯದ ಶೆಟ್ಟರ್ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 8.15ಕ್ಕೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್‌ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Join Whatsapp