ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಆಸ್ಪತ್ರೆಗೆ ದಾಖಲು

Prasthutha|

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -


79 ವರ್ಷದ ಉಮ್ಮನ್ ಚಾಂಡಿ ನ್ಯುಮೋನಿಯಾ ಮತ್ತು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಬಗ್ಗೆ ಉಮ್ಮನ್ ಚಾಂಡಿ ಅವರ ಮಗ ಫೇಸ್ಬುಕ್ ಲೈವ್ ವಿಡಿಯೋ ಮಾಡಿದ್ದು, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ ಮಾಡಿ ನಮ್ಮ ತಂದೆಯ ಆರೋಗ್ಯ ವಿಚಾರಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

- Advertisement -


ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿರುವ ಉಮ್ಮನ್ ಚಾಂಡಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇನ್ನೂ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

Join Whatsapp