Home ಟಾಪ್ ಸುದ್ದಿಗಳು ವಿಶ್ವ ಮಾಸ್ಟರ್ಸ್ ಚಾಂಪಿಯನ್ ಶಿಪ್ ನಲ್ಲಿ ಕಂಚು ಗೆದ್ದ ಕೇರಳದ ಮಾಜಿ ಶಾಸಕ

ವಿಶ್ವ ಮಾಸ್ಟರ್ಸ್ ಚಾಂಪಿಯನ್ ಶಿಪ್ ನಲ್ಲಿ ಕಂಚು ಗೆದ್ದ ಕೇರಳದ ಮಾಜಿ ಶಾಸಕ

ತಿರುವನಂತಪುರಂ: ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022ರಲ್ಲಿ 200 ಮೀಟರ್ ಮತ್ತು 80 ಮೀಟರ್ ಓಟದ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕಗಳನ್ನು ಕೇರಳದ ಪಿರಾವೋಂ ಕ್ಷೇತ್ರದ ಮಾಜಿ ಶಾಸಕ ಎಂ ಜೆ ಜೇಕಬ್ ಅವರು ಗೆದ್ದುಕೊಂಡಿದ್ದಾರೆ.


ಅವರು ಹಲವು ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹಾಗೂ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ವಿಜೇತರಾಗಿದ್ದು, ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ.


ಈ ಹಿಂದೆ ಕೂಡ ಅವರು ಫ್ರಾನ್ಸ್, ಆಸ್ಟ್ರೇಲಿಯಾ, ಸ್ಪೇನ್ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ನಲ್ಲಿ ಹಾಗೂ ಜಪಾನ್, ಸಿಂಗಾಪುರ್, ಚೀನಾ ಮತ್ತು ಮಲೇಷಿಯಾದ ಏಷ್ಯನ್ ಮಾಸ್ಟರ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.

Join Whatsapp
Exit mobile version