Home ಕರಾವಳಿ ಮಾಜಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಾಂಗ್ರೆಸ್’ಗೆ ಗುಡ್ ಬೈ

ಮಾಜಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಾಂಗ್ರೆಸ್’ಗೆ ಗುಡ್ ಬೈ

ಉಡುಪಿ: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಮಾಜಿ ವಿಧಾನ ಪರಿಷತ್ ಸಭಾಪತಿ, ಕಾಂಗ್ರೆಸ್ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿಯವರು ಕಾಂಗ್ರೆಸ್ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ಯುವಕರು ಅವಕಾಶ ಮಾಡಿಕೊಡುವ ಬಗ್ಗೆ ಪ್ರತಾಪ್ ಚಂದ್ರ ಶೆಟ್ಟಿ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.


ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರು ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಚಂದ್ರ ಶೆಟ್ಟಿಯವರನ್ನು ನಾವು ಭೇಟಿಯಾಗಿದ್ದೇವೆ. ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಯಾವುದೇ ಅಪಸ್ವರ ಇಲ್ಲ. ಸಮಾವೇಶದಲ್ಲೂ ಅವರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

Join Whatsapp
Exit mobile version