ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು(ಮಂಗಳವಾರ)ಬಿಜೆಪಿಗೆ ಸೇರಿದ್ದಾರೆ.
ನಿನ್ನೆ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಮುಂಬೈ ಬಿಜೆಪಿ ಕಚೇರಿಯಲ್ಲಿ ಚವಾಣ್ ಪಕ್ಷಕ್ಕೆ ಸೇರಿದ್ದು ಅವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್ಸಿ ಅಮರ್ ರಾಜುರ್ಕರ್ ಕೂಡಾ ಬಿಜೆಪಿ ಸೇರಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮುಂಬೈ ಬಿಜೆಪಿ ಕಚೇರಿಯಲ್ಲಿ ಅಧಿಕೃತ ಕಾರ್ಯಕ್ರಮ ನಡೆಯಿತು.