ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್ ಕಾಂಗ್ರೆಸ್ ಗೆ ರಾಜೀನಾಮೆ

Prasthutha|

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ.

- Advertisement -


ಚವಾಣ್ ಅವರು ಪಕ್ಷದ ಬಗ್ಗೆ ಅತೃಪ್ತರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಇತ್ತ ಬಿಜೆಪಿ ಕಚೇರಿ ಕಾಂಗ್ರೆಸ್ ಮುಖಂಡನ ಪ್ರವೇಶಕ್ಕೆ ಸಿದ್ಧತೆ ನಡೆದಿದೆ. ಇಂದು (ಸೋಮವಾರ) ಬೆಳಗ್ಗೆ ಅಶೋಕ್ ಚವಾಣ್ ಅವರು ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp