Home ಟಾಪ್ ಸುದ್ದಿಗಳು ತನಿಖೆಯ ಹಾದಿ ತಪ್ಪಿಸಲು ಯತ್ನ| ಮಹಾರಾಷ್ಟ್ರ ಮಾಜಿ ಗೃಹ ಸಚಿವ ದೇಶ್‌ಮುಖ್ ವಕೀಲನ ಬಂಧನ!

ತನಿಖೆಯ ಹಾದಿ ತಪ್ಪಿಸಲು ಯತ್ನ| ಮಹಾರಾಷ್ಟ್ರ ಮಾಜಿ ಗೃಹ ಸಚಿವ ದೇಶ್‌ಮುಖ್ ವಕೀಲನ ಬಂಧನ!

ಹೊಸದಿಲ್ಲಿ: ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದ ಆರೋಪದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರ ವಕೀಲ ಆನಂದ್‌ ಡಾಗಾ ಅವರನ್ನು ಸಿಬಿಐ ಬಂಧಿಸಿದೆ.  ‘ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ದೇಶ್ಮುಖ್ ಅವರ ವಿರುದ್ಧ ಕೈಗೊಂಡಿದ್ದ ತನಿಖೆಯ ಹಾದಿಯನ್ನು ತಪ್ಪಿಸಲು ಯತ್ನಿಸಿದ ಆರೋಪದ ಮೇಲೆ ವಕೀಲ ಡಾಗಾ ಅವರನ್ನು ಮುಂಬೈನಲ್ಲಿ ಬಂಧಿಸಿ, ನವದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಕರೆತರಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಡಾಗಾ ಅವರಿಂದ ಲಂಚ ಪಡೆದ ಆರೋಪದ ಮೇಲೆ ಸಿಬಿಐ ಸಬ್‌ ಇನ್ಸ್ಪೆಕ್ಟರ್‌ ಅಭಿಷೇಕ್ ತಿವಾರಿ ಎಂಬುವವನ್ನು ಬುಧವಾರ ರಾತ್ರಿ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನೂ ಕೋರ್ಟ್‌ಗೆ ಹಾಜರುಪಡಿಸಲಾಗಿದೆ.  

‘ತನಿಖೆಯ ಪ್ರಾಥಮಿಕ ವರದಿ ಪ್ರಕಾರ ದೇಶ್ಮುಖ್‌ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂಬ ಮಾಹಿತಿ ಸೋರಿಕೆಯಾಗಿರುವುದು ಸಿಬಿಐಗೆ ಸಾಕಷ್ಟು ಮುಜುಗರವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಸಿಬಿಐ ಈಗ ವಕೀಲ ಡಾಗಾ ಅವರನ್ನು ಬಂಧಿಸಿದೆ.

Join Whatsapp
Exit mobile version