ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್ ಕಾಂಗ್ರೆಸ್ ಗೆ ಸೇರ್ಪಡೆ

Prasthutha|

ಹೊಸದಿಲ್ಲಿ : ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್ ಇಂದು ಬಿಜೆಪಿ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.

- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜನ್ಮ ದಿನದಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಎಚ್. ಕೆ ಪಾಟೀಲ್ ಅವರ ಉಪಸ್ಥಿತಿಯಲ್ಲಿ ಸೇರ್ಪಡೆಗೊಂಡಿರುವುದಾಗಿ ವರದಿಯಾಗಿದೆ.

2014 ರ ತನಕ ಕಾಂಗ್ರೆಸ್ ಪಕ್ಷದಲ್ಲಿದ್ದ ದೇಶ್ ಮುಖ್, ಮಹಾರಾಷ್ಟ್ರದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 2004 ರಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಆರ್ಥಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2014 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತ ಆದಿತ್ಯ ಗೋಸ್ವಾಮಿ, ‘ಡಾ. ಸುನೀಲ್ ದೇಶ್ ಮುಖ್ ಅವರೊಂದಿಗೆ, ತಿರೋರಾ ಕ್ಷೇತ್ರದ 18 ಬಿಜೆಪಿ ಕಾರ್ಪೋರೇಟರ್ ಗಳು ಮತ್ತು ಮಾಜಿ ಎನ್‌ ಸಿ ಪಿ ಶಾಸಕ ಎಸ್. ದಿಲೀಪ್ ಬನ್ಸೋಡ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರಿದ್ದಾರೆ’ ಎಂದು ತಿಳಿಸಿದ್ದಾರೆ.

Join Whatsapp