ಬಿಜೆಪಿ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿದ ಮಾಜಿ ಸಚಿವ ಎ ಮಂಜು

Prasthutha|

ಹಾಸನ: ವಿಧಾನಪರಿಷತ್ ಚುನಾಚಣೆಯ ಬಳಿಕ‌ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಎ.ಮಂಜು ಶನಿವಾರ (ಮಾರ್ಚ್ 11) ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

- Advertisement -

ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕ ಹೆಚ್.ಡಿ.ರೇವಣ್ಣ ಅವರ ಸಮ್ಮುಖದಲ್ಲಿ ರಾಮನಗರದ ಬಿಡದಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಬಳಿಕ ಸಂಕಲ್ಪ ಹೋಮದ ಪೂರ್ಣಾಹುತಿ ಪೂಜೆಯಲ್ಲಿ ಭಾಗಿಯಾದರು. ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಂಜು, ಅರಕಲಗೂಡು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್​ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದರು.

Join Whatsapp