ಮಾಜಿ ಸಚಿವ ಈಶ್ವರಪ್ಪ, ರಮೇಶ್ ಜಾರಕಿಹೊಳಿ ನನ್ನ ಸಂಪರ್ಕದಲ್ಲಿದ್ದಾರೆ: ಸಿಎಂ ಬೊಮ್ಮಾಯಿ

Prasthutha|

ಬೆಳಗಾವಿ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.



Join Whatsapp