Home ಟಾಪ್ ಸುದ್ದಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ, ಉದ್ಯಮಿ ಬರ್ಬರ ಹತ್ಯೆ

ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ, ಉದ್ಯಮಿ ಬರ್ಬರ ಹತ್ಯೆ

ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಗ್ರಾನೈಟ್ ಉದ್ಯಮಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.


ಕೃಷ್ಣೇಗೌಡ(53) ಅವರನ್ನು ಗ್ರಾನೈಟ್ ಫ್ಯಾಕ್ಟರಿ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣೇಗೌಡನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಹಾಸನ ಕ್ಷೇತ್ರದ JDS ಶಾಸಕ ಸ್ವರೂಪ್ ಪ್ರಕಾಶ್ ಅವರು ಕೂಡ ಆಗಮಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp
Exit mobile version