ಬಿಜೆಪಿಗೆ ಬಿಗ್ ಶಾಕ್: ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನೆಡೆ ಉಂಟಾಗಿದೆ. ಮಾಜಿ ಸಚಿವ ಮತ್ತು ಕಲಬುರಗಿಯ ಪ್ರಭಾವಿ ನಾಯಕ ಮಾಲಿಕಯ್ಯ ಗುತ್ತೇದಾರ ಬಿಜೆಪಿ ತೊರೆದು ಮರಳಿ ಗೂಡಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -


ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರಿದರು.


ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಮಾಲಿಕಯ್ಯ ಗುತ್ತೇದಾರ, ಬಿಜೆಪಿ ನನ್ನನ್ನು ನಡೆಸಿಕೊಂಡ ಬಗ್ಗೆ ಬಹಳ ನೋವಿದೆ. ಹಿಂದುಳಿದ ವರ್ಗದವನನ್ನು ಹೇಗೆ ನಡೆಸಿಕೊಳ್ಳುತ್ತಾರೆಂಬ ಅನುಭವ ಆಗಿದೆ. ಎಂ.ವೈ.ಪಾಟೀಲ್ ಕೂಡ ಕಾಂಗ್ರೆಸ್ಗೆ ಬರ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

Join Whatsapp