ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿಯಾಗಿದೆ. ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ನಾಗೇಂದ್ರ ಅವರನ್ನು ಇಂದು ಕೋರ್ಟ್ ಗೆ ಇ.ಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಪ್ರಕರಣದಲ್ಲಿ ಈಗಾಗಲೇ 5 ದಿನಗಳಂತೆ ಎರಡು ಬಾರಿ ಈಗಾಗಲೇ ಇ.ಡಿ ಕಸ್ಟಡಿಗೆ ಪಡೆದಿತ್ತು. ಆದರೆ ಅಕ್ರಮದ ಬಗ್ಗೆ ಇ.ಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿಲ್ಲ. ಹೀಗಾಗಿ ಮತ್ತೆ ಕಷ್ಟಡಿಗೆ ಕೇಳಲು ಇಡಿ ಸಿದ್ಧತೆ ನಡೆಸಿತ್ತು.