ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ

Prasthutha|

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

- Advertisement -


ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದ ನಂತರ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.



Join Whatsapp