ಮಕೇ: ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ (27) ಮೆದುಳಿನ ರಕ್ತಸ್ರಾವ ಮತ್ತು ಹೃದಯಾಘಾತದಿಂದ ನಿಧನರಾಗಿದ್ದಾರೆ.
2018 ರಲ್ಲಿ ಮಿಸ್ ಯುನೈಟೆಡ್ ಕಾಂಟಿನೆಂಟ್ಸ್ ಬ್ರೆಜಿಲ್ ಕಿರೀಟವನ್ನು Ms ಕೊರಿಯಾ ಪಡೆದಿದ್ದರು.
ಕಳೆದ ಎರಡು ತಿಂಗಳಿಂದ ಕೊರಿಯಾ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಟಾನ್ಸಿಲ್ ಗಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಕೆಲವು ದಿನಗಳ ನಂತರ ಆಕೆಗೆ ಭಾರೀ ರಕ್ತಸ್ರಾವವಾಯಿತಲ್ಲದೆ, ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.