ಬೆಂಗಳೂರು: ಕಾಂಗ್ರೆಸ್ ನಿಂದ ವಿಧಾನಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಬಿಜೆಪಿ ಸೇರ್ಪಡೆಗೊಂಡರು.
ನಗರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಿಜೆಪಿ ಸೇರಿದರು. ಪುಲಿಕೇಶಿನಗರ ಕ್ಷೇತ್ರದ ತಮ್ಮ ಬೆಂಬಲಿಗರ ಜತೆ ಅಖಂಡ ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ಧ್ವಜ ಕೊಟ್ಟು, ಪಕ್ಷದ ಶಾಲು ಹಾಕಿ ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.