ಬಿಜೆಪಿಯ 40 ಶಾಸಕರು ಕಾಂಗ್ರೆಸ್ ಸೇರ್ಪಡೆ: ರಾಜು ಕಾಗೆ ಹೊಸ ಬಾಂಬ್

Prasthutha|

ಬೆಳಗಾವಿ: ಬಿಜೆಪಿಯ 40 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.

- Advertisement -


ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾತನಾಡಿದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ. ಶೀಘ್ರದಲ್ಲೇ 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದ್ದಾರೆ.


ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ. ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ಬಿಜೆಪಿ ವಿಫಲವಾಗಿದೆ. ಹೀಗಾಗಿ ಅಸಮಾಧಾನದಿಂದ 40 ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Join Whatsapp