ಮಾಜಿ ಶಾಸಕರಾದ ನಂಜುಂಡಸ್ವಾಮಿ, ಮನೋಹರ ಐನಾಪುರ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ನಂಜುಂಡಸ್ವಾಮಿ ಮತ್ತು ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ, ಮೈಸೂರು ಮಾಜಿ ಮೇಯರ್ ಪುರುಷೋತ್ತಮ ಅವರು ಕಾಂಗ್ರೆಸ್ ಸೇರ್ಪಡೆಯಾದರು.

- Advertisement -


ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮುಖಂಡರಾದ ಸಲೀಂ ಅಹ್ಮದ್‌, ಪ್ರಿಯಾಂಕ್ ಖರ್ಗೆ, ಆರ್. ಧ್ರುವನಾರಾಯಣ, ರಾಜಶೇಖರ್ ಪಾಟೀಲ ಸಮ್ಮುಖದಲ್ಲಿ ಇವರು ಪಕ್ಷ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಡಿ.ಕೆ.ಶಿ, ಇಂದು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಿ ಶಾಸಕರು ಕೂಡ ಪಕ್ಷಕ್ಕೆ ಬರಲಿದ್ದಾರೆ ಎಂದರು.

Join Whatsapp