ಬೆಂಗಳೂರು: ಒಂದು ವಾರದ ಹಿಂದೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಪರಿಷತ್ ಸದಸ್ಯ ಎಂಡಿ ಲಕ್ಷ್ಮೀ ನಾರಾಯಣ ಇಂದು ಬಿಜೆಪಿಗೆ ಸೇರ್ಪಡೆಗೊಳ್ಳುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಲಕ್ಷ್ಮೀ ನಾರಾಯಣ ಅವರು, ಸಪ್ಟೆಂಬರ್ 31 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಕಾಂಗ್ರೆಸ್ ಪಕ್ಷ ತೊರೆದಿದ್ದರು. ಪಕ್ಷದ ನಡವಳಿಕೆಯ ಬಗ್ಗೆ ಅಸಮಾಧಾನ ಇರುವುದರಿಂದ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದರು. ಇದೀಗ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿಯೊಂದಿಗೆ ಕೈ ಮಿಲಾಯಿಸುವುದಾಗಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಲಕ್ಷ್ಮೀ ನಾರಾಯಣ, ಇಂದು (10-09-2022) ದೊಡ್ಡ ಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಗ್ಗೆ 11.30 ಕ್ಕೆ ಬಿಜೆಪಿಗೆ ಸೇರಲಿದ್ದೇನೆ ಎಂದು ತಿಳಿಸಿದರು.