Home ಜಾಲತಾಣದಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ: ಮಾಜಿ MLC ಸಂದೇಶ್ ನಾಗರಾಜ್

ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ: ಮಾಜಿ MLC ಸಂದೇಶ್ ನಾಗರಾಜ್

ಮೈಸೂರು: ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುವುದಾಗಿ ಪ್ರಕಟಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮೋಸ ಮಾಡಿದರು, ಮೋಸ ಮತ್ತು ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಆದ್ದರಿಂದ ಬಿಜೆಪಿಯ ಸಹವಾಸ ಸಾಕು ಎಂದು ತೀರ್ಮಾನಿಸಿದ್ದೇನೆ.

‘ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೂ ಮಾತನಾಡಲಿದ್ದೇನೆ’ ಎಂದು ಸಂದೇಶ್ ನಾಗರಾಜ್ ಇಲ್ಲಿ ಸೋಮವಾರ ತಿಳಿಸಿದರು.

‘ಎ.ಎಚ್.ವಿಶ್ವನಾಥ್‌ಗೂ ಅನ್ಯಾಯ ಮಾಡಿದರು. ಪಕ್ಷವನ್ನು ಅಧಿಕಾರಕ್ಕೆ ತಂದ ಬಿ.ಎಸ್.ಯಡಿಯೂರಪ್ಪ ಅವರನ್ನು  ಮುಗಿಸಿದರು. ಆ ಕಾರಣದಿಂದಲೇ ಆ ಪಕ್ಷಕ್ಕೆ 40 ಸ್ಥಾನ ನಷ್ಟವಾಗಲಿದೆ. ಈಗ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರಕ್ಕೆ ತಂದು ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದ್ದು ಎಂದು ಹೇಳಿದರು.

ನಾನು ಜೆಡಿಎಸ್ ಎಂಎಲ್’ಸಿಯಾಗಿದ್ದರೂ 2 ವರ್ಷ ಬಿಜೆಪಿಗೆ ಸಹಾಯ ಮಾಡಿದ್ದೆ, ಆದರೆ ನಾನು ಜೆಡಿಎಸ್ ತೊರೆದ ಮೇಲೆ ನನಗೆ ಯಾವುದೇ ಹುದ್ದೆ ನೀಡದೇ ಅನ್ಯಾಯ ಮಾಡಿದ್ದಾರೆ. ಹೀಗಾಗಿ ನಾನು ಬಿಜೆಪಿ ಸೇರುವುದಿಲ್ಲ, ಈ ಬಾರಿ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಂದೇಶ್ ನಾಗರಾಜ್ ಭವಿಷ್ಯ ನುಡಿದರು.

Join Whatsapp
Exit mobile version