Home ಟಾಪ್ ಸುದ್ದಿಗಳು ಸಿಎಂ ಬೊಮ್ಮಾಯಿ ಕ್ಷೇತ್ರದ ಮಾಜಿ ಸಂಸದ ಹಾಗೂ ಪುತ್ರ ಬಿಜೆಪಿಗೆ ರಾಜೀನಾಮೆ

ಸಿಎಂ ಬೊಮ್ಮಾಯಿ ಕ್ಷೇತ್ರದ ಮಾಜಿ ಸಂಸದ ಹಾಗೂ ಪುತ್ರ ಬಿಜೆಪಿಗೆ ರಾಜೀನಾಮೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ್ ಕುನ್ನೂರು ಹಾಗೂ ಅವರ ಪುತ್ರ ರಾಜು ಕುನ್ನೂರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಕಾಂಗ್ರೆಸ್’ಗೆ ಸೇರುವ ಮೂಲಕ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿದ್ದಾರೆ.


ಸೋಮವಾರ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಮಂಜುನಾಥ್ ಕುನ್ನೂರು ಶಿಗ್ಗಾಂವಿ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿದ್ದರು. 1989-1994 ಮತ್ತು 1994-1999 ರ ಅವಧಿಯಲ್ಲಿ ಶಾಸಕರಾಗಿದ್ದು, 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾದರು.

Join Whatsapp
Exit mobile version