Home ಟಾಪ್ ಸುದ್ದಿಗಳು ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಬಿಜೆಪಿ ಸೇರ್ಪಡೆ

ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಂಡ್ಯ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಯಾದರು.


ಮಲ್ಲೇಶರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಮತ್ತು ಅವರ ಪುತ್ರ ಚೇತನ್ ಗೌಡ ಬಿಜೆಪಿ ಸೇರ್ಪಡೆಯಾದರು.


ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಡಾ. ಸುಧಾಕರ್, ಗೋಪಾಲಯ್ಯ, ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್ ಸಮ್ಮುಖದಲ್ಲಿ ಸೇರಿದರು.
ಜೆಡಿಎಸ್ನಿಂದ ಉಚ್ಚಾಟನೆಯಾದ ಬಳಿಕ ಶಿವರಾಮೇಗೌಡ ಪಕ್ಷೇತರ ಸ್ಪರ್ಧೆಗೆ ತಯಾರಿ ನಡೆಸಿದ್ದರು. ನಾಗಮಂಗಲ ಕ್ಷೇತ್ರದಿಂದ ಶಿವರಾಮೇಗೌಡ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ.

Join Whatsapp
Exit mobile version