ಸರ್ಕಾರಿ ಗೌರವಗಳೊಡನೆ ಮಾಜಿ ಸಂಸದ ಆರ್.ಧ್ರುವನಾರಾಯಣ ಅಂತ್ಯಕ್ರಿಯೆ

Prasthutha|

ಚಾಮರಾಜನಗರ: ಶನಿವಾರ ಅಕಾಲಿಕವಾಗಿ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಭಾನುವಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.

- Advertisement -

ಮಧ್ಯಾಹ್ನ 1.30ರ ವೇಳೆಗೆ ಅವರ ಜಮೀನಿನಲ್ಲಿರುವ ಅವರ ತಂದೆ ತಾಯಿ ಸಮಾಧಿಯ ಬಳಿ ಇರುವ ಜಾಗಕ್ಕೆ ಮೆರವಣಿಗೆಯಲ್ಲಿ ಮೃತದೇಹವನ್ನು ತರಲಾಯಿತು. ನಂತರ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಜಿಲ್ಲಾಡಳಿತದ ಪರವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಲಾಯಿತು.



Join Whatsapp