ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಮಠಕ್ಕೆ ಗಣ್ಯರು ಭೇಟಿ ನೀಡಿದ ಸಂದರ್ಭದಲ್ಲಿ ಮುರುಘಾ ಶರಣರು ತೆಗೆಸಿಕೊಂಡ ಫೋಟೊಗಳನ್ನು ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಅ.6ರಂದು ಕಳುವಾಗಿದ್ದವು. ಫೋಟೊ ತೆಗೆಯಲು ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪವಿದ್ದ ಮೇರೆಗೆ ಬಂಧಿಸಿದರು.
ಪ್ರಕರಣ ಸಂಬಂಧ ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೂ ಶೋಧ ನಡೆಸಲಾಗಿದೆ.